ADVERTISEMENT

ಎಫ್‌ಪಿಐ ಒಳಹರಿವು ಅಬಾಧಿತ

​ಪ್ರಜಾವಾಣಿ ವಾರ್ತೆ
Published 23 ಜೂನ್ 2024, 15:56 IST
Last Updated 23 ಜೂನ್ 2024, 15:56 IST
............
............   

ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ದೇಶದ ಷೇರುಪೇಟೆಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ ಪ್ರಮಾಣವು ಏರುಗತಿಯಲ್ಲಿದೆ. ‌

ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಸರ್ಕಾರವು ಹಣಕಾಸು ನೀತಿಗಳ ಸುಧಾರಣೆ ಮತ್ತು ಆರ್ಥಿಕತೆ ಬೆಳವಣಿಗೆಗೆ ಒತ್ತು ನೀಡಲಿದೆ ಎಂಬ ಭರವಸೆಯು ಹೂಡಿಕೆದಾರರಲ್ಲಿ ಮೂಡಿರುವುದೇ ಇದಕ್ಕೆ ಕಾರಣ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಜೂನ್‌ 21ಕ್ಕೆ ಕೊನೆಗೊಂಡ ವಾರದಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ದೇಶೀಯ ಷೇರುಪೇಟೆಗಳಲ್ಲಿ ₹11,194 ಕೋಟಿ ಹೂಡಿಕೆ ಮಾಡಿದ್ದಾರೆ.

ADVERTISEMENT

‘ಚೀನಾದಲ್ಲಿ ಕಳೆದ ಎರಡು ತಿಂಗಳಿನಿಂದ ತಾಮ್ರದ ಬೆಲೆಯು ಕುಸಿತ ಕಂಡಿದೆ. ಇದು ಅಲ್ಲಿನ ಷೇರು ಮಾರುಕಟ್ಟೆಗಳ ಮೇಲೆ ಪರಿಣಾಮ ಬೀರಿದೆ. ಆರ್ಥಿಕತೆ ಬೆಳವಣಿಗೆಯೂ ಮಂದಗತಿಯಲ್ಲಿದೆ. ಮತ್ತೊಂದೆಡೆ ದೇಶೀಯ ಮಾರುಕಟ್ಟೆಯಲ್ಲಿ ಷೇರುಗಳ ಖರೀದಿ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದರಿಂದ ವಿದೇಶಿ ಒಳಹರಿವು ಹೆಚ್ಚಳವಾಗಿದೆ’ ಎಂದು ಮೋಜೊ ಪಿಎಂಎಸ್‌ನ ಮುಖ್ಯ ಹೂಡಿಕೆ ತಜ್ಞ ಸುನಿಲ್ ದಮಾನಿಯಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.