ADVERTISEMENT

ಎಫ್‌ಪಿಐ: ₹27,856 ಕೋಟಿ ಹೂಡಿಕೆ

ಪಿಟಿಐ
Published 15 ಸೆಪ್ಟೆಂಬರ್ 2024, 14:00 IST
Last Updated 15 ಸೆಪ್ಟೆಂಬರ್ 2024, 14:00 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಪ್ರಸಕ್ತ ತಿಂಗಳ ಎರಡು ವಾರದಲ್ಲಿ (ಸೆಪ್ಟೆಂಬರ್‌ 13ರ ವರೆಗೆ) ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ದೇಶದ ಈಕ್ವಿಟಿ ಮಾರುಕಟ್ಟೆಯಲ್ಲಿ ₹27,856 ಕೋಟಿ ಹೂಡಿಕೆ ಮಾಡಿದ್ದಾರೆ.

ದೇಶೀಯ ಷೇರುಪೇಟೆಯ ಚೇತರಿಕೆಯಿಂದಾಗಿ ಹೂಡಿಕೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಏಪ್ರಿಲ್‌–ಮೇ ಅವಧಿಯಲ್ಲಿ ₹34,252 ಕೋಟಿ ಬಂಡವಾಳವನ್ನು ಹಿಂಪಡೆದಿದ್ದರು. ಆದರೆ, ಜೂನ್‌ ಬಳಿಕ ದೇಶೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಷೇರುಗಳನ್ನು ಖರೀದಿಸುತ್ತಿದ್ದಾರೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೆ ಈಕ್ವಿಟಿ ಮಾರುಕಟ್ಟೆಯಲ್ಲಿ ₹70,737 ಕೋಟಿ ವಿದೇಶಿ ಬಂಡವಾಳ ಹೂಡಿಕೆಯಾಗಿದೆ.

ADVERTISEMENT

‘ಅಮೆರಿಕದಲ್ಲಿ ಸತತ ಐದನೇ ತಿಂಗಳು ಚಿಲ್ಲರೆ ಹಣದುಬ್ಬರ ಇಳಿಕೆಯಾಗಿದ್ದು, 43 ತಿಂಗಳ ಕನಿಷ್ಠ ಮಟ್ಟವಾದ ಶೇ 2.5ಕ್ಕೆ ತಲುಪಿದೆ. ಮುಂದಿನ ವಾರ ನಡೆಯಲಿರುವ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಆದ ಫೆಡರಲ್‌ ರಿಸರ್ವ್‌ ಬಡ್ಡಿದರ ಕಡಿತಗೊಳಿಸುವ ನಿರೀಕ್ಷೆ ಹೆಚ್ಚಿದೆ. ಹಾಗಾಗಿ, ಹೂಡಿಕೆ ಏರಿಕೆಯಾಗುತ್ತಿದೆ’ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.