ನವದೆಹಲಿ: ದೇಶದ ಷೇರುಪೇಟೆಗಳಲ್ಲಿ ಜುಲೈ ಮೊದಲ ವಾರದಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ), ₹7,900 ಕೋಟಿ ಹೂಡಿಕೆ ಮಾಡಿದ್ದಾರೆ.
ಪ್ರಸಕ್ತ ವರ್ಷದ ಜನವರಿಯಿಂದ ಇಲ್ಲಿಯವರೆಗೆ ಷೇರುಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ ಮೊತ್ತವು ₹1.16 ಲಕ್ಷ ಕೋಟಿ ಆಗಿದೆ ಎಂದು ಷೇರುಪೇಟೆ ಅಂಕಿಅಂಶ ತಿಳಿಸಿವೆ.
ಸರ್ಕಾರಿ ಸಾಲ ಪತ್ರಗಳಲ್ಲಿ ₹6,304 ಕೋಟಿ ಹೂಡಿಕೆ ಮಾಡಿದ್ದಾರೆ. ಜನವರಿಯಿಂದ ಇಲ್ಲಿಯವರೆಗೆ ಸಾಲ ಪತ್ರಗಳಲ್ಲಿನ ಹೂಡಿಕೆ ಮೊತ್ತವು ₹74,928 ಕೋಟಿ ಆಗಿದೆ.
ಇದೇ 23ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮೇಲೆ ಹೂಡಿಕೆದಾರರು ದೃಷ್ಟಿ ನೆಟ್ಟಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಕಂಪನಿಗಳು ಉತ್ತಮ ಲಾಭ ಗಳಿಸಲಿವೆ ಎಂಬ ಆಶಾಭಾವವು ಹೂಡಿಕೆದಾರರಲ್ಲಿ ಮೂಡಿದೆ. ಇದು ವಿದೇಶಿ ಬಂಡವಾಳ ಒಳಹರಿವಿನ ಪ್ರಮಾಣ ಹೆಚ್ಚಳಕ್ಕೆ ಸಹಕಾರಿಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.