ADVERTISEMENT

ಎಫ್‌ಪಿಐ: ₹15 ಸಾವಿರ ಕೋಟಿ ಹೂಡಿಕೆ

ಪಿಟಿಐ
Published 14 ಜುಲೈ 2024, 14:11 IST
Last Updated 14 ಜುಲೈ 2024, 14:11 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದ ಷೇರುಪೇಟೆಗಳಲ್ಲಿ ಪ್ರಸಕ್ತ ತಿಂಗಳ ಮೊದಲ ಎರಡು ವಾರದಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ), ₹15,352 ಕೋಟಿ ಹೂಡಿಕೆ ಮಾಡಿದ್ದಾರೆ. 

ಕೇಂದ್ರ ಸರ್ಕಾರ ಕೈಗೊಂಡಿರುವ ಆರ್ಥಿಕ ಸುಧಾರಣಾ ಕ್ರಮಗಳು, ಅಮೆರಿಕದ ಫೆಡರಲ್‌ ರಿಸರ್ವ್‌ ಬಡ್ಡಿದರ ಕಡಿತಗೊಳಿಸುವ ನಿರೀಕ್ಷೆ ಮತ್ತು ದೇಶೀಯ ಮಾರುಕಟ್ಟೆಯಲ್ಲಿನ ಬೇಡಿಕೆ ಹೆಚ್ಚಳವೇ ಹೂಡಿಕೆ ಪ್ರಮಾಣದಲ್ಲಿ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಇದೇ ಅವಧಿಯಲ್ಲಿ ಸರ್ಕಾರಿ ಸಾಲ ಪತ್ರಗಳಲ್ಲಿ ಒಟ್ಟು ₹8,484 ಕೋಟಿ ಹೂಡಿಕೆ ಮಾಡಿದ್ದಾರೆ. ಜನವರಿಯಿಂದ ಇಲ್ಲಿಯವರೆಗೆ ಸಾಲ ಪತ್ರಗಳಲ್ಲಿನ ಹೂಡಿಕೆ ಮೊತ್ತವು ₹77,109 ಕೋಟಿ ಆಗಿದೆ ಎಂದು ಷೇರುಪೇಟೆ ಅಂಕಿಅಂಶ ತಿಳಿಸಿವೆ. 

ADVERTISEMENT

‘ದೇಶದ ಆರ್ಥಿಕತೆ ಬೆಳವಣಿಗೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಯಾವ ಯೋಜನೆಗಳನ್ನು ಜಾರಿಗೊಳಿಸಲಿದೆ ಎಂಬುದನ್ನು ಹೂಡಿಕೆದಾರರು ಎದುರು ನೋಡುತ್ತಿದ್ದಾರೆ’ ಎಂದು ಮಾರ್ನಿಂಗ್‌ಸ್ಟಾರ್‌ ಇನ್‌ವೆಸ್ಟ್‌ಮೆಂಟ್ಸ್‌ ರಿಸರ್ಚ್ ಇಂಡಿಯಾದ ಸಹ ನಿರ್ದೇಶಕ (ಸಂಶೋಧನಾ ವಿಭಾಗ) ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.