ADVERTISEMENT

ವಿದೇಶಿ ಬಂಡವಾಳ ಹೂಡಿಕೆ: ₹33,600 ಕೋಟಿ ಹೂಡಿಕೆ

ಪಿಟಿಐ
Published 28 ಜುಲೈ 2024, 14:18 IST
Last Updated 28 ಜುಲೈ 2024, 14:18 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ:‌ ದೇಶದ ಷೇರು ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು ಇದೇ 26ರ ವರೆಗೆ ₹33,600 ಕೋಟಿ ಹೂಡಿಕೆ ಮಾಡಿದ್ದಾರೆ.

ಸುಸ್ಥಿರ ಆರ್ಥಿಕತೆ ಬೆಳವಣಿಗೆ ಮತ್ತು ಷೇರುಪೇಟೆಯಲ್ಲಿನ ಉತ್ತಮ ಗಳಿಕೆಯಿಂದ ಒಳಹರಿವು ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಇದೇ ಅವಧಿಯಲ್ಲಿ ಸರ್ಕಾರದ ಸಾಲ ಪತ್ರಗಳಲ್ಲಿ ₹19,223 ಕೋಟಿ ಬಂಡವಾಳ ಹೂಡಿಕೆಯಾಗಿದೆ. ಪ್ರಸಕ್ತ ವರ್ಷದ ಆರಂಭದಿಂದ ಇಲ್ಲಿಯವರೆಗೆ ಸಾಲ ಪತ್ರಗಳಲ್ಲಿ ಒಟ್ಟು ₹87,847 ಕೋಟಿ ಹೂಡಿಕೆಯಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.