ನವದೆಹಲಿ: ದೇಶದ ಈಕ್ವಿಟಿ ಮಾರುಕಟ್ಟೆಯಿಂದ ನವೆಂಬರ್ 4ರಿಂದ 8ರ ವರೆಗಿನ ಐದು ದಿನದ ವಹಿವಾಟಿನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಪಿಐ) ₹20 ಸಾವಿರ ಕೋಟಿ ಬಂಡವಾಳವನ್ನು ಹಿಂಪಡೆದಿದ್ದಾರೆ.
ಸೆಪ್ಟೆಂಬರ್‌ನಲ್ಲಿ ₹57,724 ಕೋಟಿ ಹೂಡಿಕೆಯಾಗಿದ್ದು, ದಾಖಲೆಯಾಗಿತ್ತು. ಅಕ್ಟೋಬರ್‌ನಲ್ಲಿ ₹94,017 ಕೋಟಿ ಬಂಡವಾಳ ವಾಪಸ್ ಪಡೆಯಲಾಗಿತ್ತು.
‘ಚೀನಾದ ಆರ್ಥಿಕತೆಯು ಮಂದಗತಿಯಲ್ಲಿದೆ. ಇದಕ್ಕೆ ಚೇತರಿಕೆ ನೀಡುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರವು ವಿದೇಶಿ ಬಂಡವಾಳದ ಆಕರ್ಷಣೆಗೆ ಪೂರಕವಾದ ಹಲವು ಕ್ರಮಗಳನ್ನು ಕೈಗೊಂಡಿದೆ. ಹಾಗಾಗಿ, ವಿದೇಶಿ ಹೂಡಿಕೆದಾರರು ಚೀನಾದ ಮಾರುಕಟ್ಟೆಯತ್ತ ಹೊರಳಿದ್ದಾರೆ. ಇದರಿಂದ ದೇಶೀಯ ಮಾರುಕಟ್ಟೆಯಲ್ಲಿ ಬಂಡವಾಳದ ಹೊರಹರಿವು ಹೆಚ್ಚಳವಾಗಿದೆ’ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.