ADVERTISEMENT

ಎಫ್‌ಪಿಐ: ₹85,790 ಕೋಟಿ ವಾಪಸ್‌

ಪಿಟಿಐ
Published 27 ಅಕ್ಟೋಬರ್ 2024, 14:23 IST
Last Updated 27 ಅಕ್ಟೋಬರ್ 2024, 14:23 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದ ಈಕ್ವಿಟಿ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಅಕ್ಟೋಬರ್‌ 25ರ ವರೆಗೆ ₹85,790 ಕೋಟಿ ಬಂಡವಾಳವನ್ನು ಹಿಂಪಡೆದಿದ್ದಾರೆ.

ಆರ್ಥಿಕತೆಗೆ ಚೇತರಿಕೆ ನೀಡುವ ನಿಟ್ಟಿನಲ್ಲಿ ಚೀನಾವು ಬಡ್ಡಿದರ ಕಡಿತ ಸೇರಿ ಹಲವು ಕ್ರಮಗಳನ್ನು ಕೈಗೊಂಡಿದೆ. ಇದು ವಿದೇಶಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿದೆ. ಹಾಗಾಗಿ, ಅಲ್ಲಿನ ಮಾರುಕಟ್ಟೆಯಲ್ಲಿ ಹೂಡಿಕೆಗೆ ಮುಂದಾಗಿದ್ದಾರೆ. ಇದರಿಂದ ದೇಶೀಯ ಮಾರುಕಟ್ಟೆಯಲ್ಲಿ ಬಂಡವಾಳದ ಹೊರಹರಿವು ಹೆಚ್ಚಳವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

2020ರ ಮಾರ್ಚ್‌ನಲ್ಲಿ ವಿದೇಶಿ ಹೂಡಿಕೆದಾರರು ₹61,973 ಕೋಟಿ ಬಂಡವಾಳವನ್ನು ವಾಪಸ್‌ ಪಡೆದಿದ್ದರು. ಈ ವರ್ಷದ ಅಕ್ಟೋಬರ್‌ನಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಹಿಂಪಡೆದಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.