ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಾರವರ್ಧಕ ಅಕ್ಕಿ, ಹೈನು ಉತ್ಪನ್ನಗಳು ಹಾಗೂ ಮಸಾಲೆ ಪದಾರ್ಥಗಳ ಸುರಕ್ಷತೆ ಮತ್ತು ಗುಣಮಟ್ಟದ ಪರೀಕ್ಷೆಗೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ) ಮುಂದಾಗಿದೆ.
ದೇಶದ ಜನಪ್ರಿಯ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಕೀಟನಾಶಕ ಅಂಶವಿದೆ ಎಂದು ಹಾಂಗ್‌ಕಾಂಗ್ ಹಾಗೂ ಸಿಂಗಪುರ ಆರೋಪಿಸಿದ್ದು, ಅಲ್ಲಿ ಇವುಗಳ ಬಳಕೆ ಹಾಗೂ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಹಾಗಾಗಿ, ದೇಶೀಯ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ಆಹಾರ ಪದಾರ್ಥಗಳ ಗುಣಮಟ್ಟದ ಮೇಲೆ ಹೆಚ್ಚಿನ ನಿಗಾವಹಿಸಲು ಪ್ರಾಧಿಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಹಣ್ಣು ಮತ್ತು ತರಕಾರಿಗಳು, ಸಾಲ್ಮನ್ ಮೀನಿನ ಮಾಂಸ, ಪಾಕಶಾಲೆಯಲ್ಲಿ ಬಳಸುವ ಗಿಡಮೂಲಿಕೆ ಪದಾರ್ಥಗಳು, ಹಾಲು ಹಾಗೂ ಅದರ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.