ADVERTISEMENT

ವಾರದ ನಂತರ ಪೆಟ್ರೋಲ್‌, ಡೀಸೆಲ್‌ ದರ ತಟಸ್ಥ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಏಪ್ರಿಲ್ 2022, 2:24 IST
Last Updated 7 ಏಪ್ರಿಲ್ 2022, 2:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಒಂದು ವಾರದಿಂದ ನಿರಂತರ ಹೆಚ್ಚಳ ಕಂಡಿದ್ದ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಗುರುವಾರ ಪರಿಷ್ಕೃತಗೊಂಡಿಲ್ಲ. ಪ್ರಸ್ತುತ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ ದರ ₹111.09 ಮತ್ತು ಡೀಸೆಲ್‌ ದರ ₹94.79 ಇದೆ.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಕಳೆದ 17 ದಿನಗಳಲ್ಲಿ 14 ಬಾರಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಿವೆ. ಮಾರ್ಚ್‌ 22ರಿಂದ ಏಪ್ರಿಲ್‌ 7ರವರೆಗೆ ಬೆಂಗಳೂರಿನಲ್ಲಿ ಪೆಟ್ರೋಲ್‌ ದರವು ಲೀಟರಿಗೆ ₹10.43ರಷ್ಟು ಮತ್ತು ಡೀಸೆಲ್‌ ದರ ₹9.70ರಷ್ಟು ಹೆಚ್ಚಳ ಆಗಿದೆ.

ಸ್ಥಳೀಯ ಮಾರಾಟ ತೆರಿಗೆ ಮತ್ತು ಸಾಗಣೆ ವೆಚ್ಚಕ್ಕೆ ಅನುಗುಣವಾಗಿ ಮಾರಾಟ ದರವು ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸ ಆಗುತ್ತದೆ. ದೆಹಲಿಯಲ್ಲಿಂದು ಲೀಟರ್ ಪೆಟ್ರೋಲ್ ₹105.41, ಲೀಟರ್ ಡೀಸೆಲ್ ₹96.677ಕ್ಕೆ ಮಾರಾಟವಾಗುತ್ತಿದೆ.

ADVERTISEMENT

ಮುಂಬೈನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ ‌₹‌120.51 ಮತ್ತು ಡೀಸೆಲ್‌ಗೆ ₹104.77 ದರವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.