ADVERTISEMENT

ಸ್ಟಾರ್ಟ್ಅಪ್‌ಗಳಿಗೆ ಧನ ಸಹಾಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2023, 16:15 IST
Last Updated 23 ಡಿಸೆಂಬರ್ 2023, 16:15 IST

ಬೆಂಗಳೂರು: ‘ಸ್ಟಾರ್ಟ್‌ಅಪ್‌ಗಳಿಗೆ ಧನಸಹಾಯಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನವನ್ನು 2024ರ ಜ. 1ರವರೆಗೆ ವಿಸ್ತರಿಸಲಾಗಿದೆ’ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಹಿಂದೆ ಡಿ. 23ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.

ಹೊಸ ಸ್ಟಾರ್ಟ್ಅಪ್‌ಗಳಿಂದ ವಿನೂತನ ಚಿಂತನೆಯನ್ನು ಹೊರತಂದು ಪೋಷಿಸುವ ಜೊತೆಗೆ ವಿವಿಧ ಹಂತಗಳಲ್ಲಿ ಹಣಕಾಸಿನ ನೆರವು ನೀಡುವ ಉದ್ದೇಶದಿಂದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಈ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆಯಡಿ ಸ್ಟಾರ್ಟ್‌ಅಪ್‌ಗಳಿಗೆ ₹ 50 ಲಕ್ಷವರೆಗೆ ಅನುದಾನ ನೀಡಲಾಗುತ್ತದೆ.

‘ವಿಭಿನ್ನ ಅನ್ವೇಷಣೆಗಳೊಂದಿಗೆ ಮುಂದೆ ಬರುವ ಉದಯೋನ್ಮುಖ ಸ್ಟಾರ್ಟ್‌ಅಪ್‌ಗಳಿಗೆ ಹಣಕಾಸಿನ ನೆರವು ನೀಡಲಾಗುತ್ತದೆ. ಈ ಯೋಜನೆಗೆ ಸ್ಟಾರ್ಟ್‌ಅಪ್‌ಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದರಿಂದ ಅರ್ಜಿ ಸಲ್ಲಿಸಲು ಇನ್ನಷ್ಟು ದಿನಗಳ ಕಾಲಾವಕಾಶ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳಿಗೆ ಸ್ಟಾರ್ಟ್ಅಪ್ ಕರ್ನಾಟಕ (missionstartupkarnataka.org) ವೀಕ್ಷಿಸಬಹುದು’ ಎಂದೂ ಅವರು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT