ADVERTISEMENT

ತೈಲ ಬೆಲೆ ಸ್ಥಿರತೆ: ಪೆಟ್ರೋಲಿಯಂ ಸಚಿವ ಪುರಿ ವಿಶ್ವಾಸ

ಪಿಟಿಐ
Published 14 ನವೆಂಬರ್ 2024, 13:01 IST
Last Updated 14 ನವೆಂಬರ್ 2024, 13:01 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

‌ನವದೆಹಲಿ: ‘ಅಮೆರಿಕ ಮತ್ತು ಕೆನಡಾದಿಂದ ಹೆಚ್ಚಿನ ಪ್ರಮಾಣದಲ್ಲಿ ಜಾಗತಿಕ ಮಾರುಕಟ್ಟೆಗೆ ಕಚ್ಚಾ ತೈಲ ಪೂರೈಕೆಯಾಗುವ ನಿರೀಕ್ಷೆಯಿದೆ. ಹಾಗಾಗಿ, ತೈಲ ಪೂರೈಕೆ ಬಗ್ಗೆ ಎದುರಾಗಿರುವ ಆತಂಕ ಕಡಿಮೆಯಾಗಲಿದ್ದು, ಬೆಲೆಯು ಸ್ಥಿರತೆ ಕಾಣುವ ಸಾಧ್ಯತೆಯಿದೆ’ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಭಾರತೀಯ ಕೈಗಾರಿಕಾ ಒಕ್ಕೂಟದಿಂದ (ಸಿಐಐ) ಗುರುವಾರ ಹಮ್ಮಿಕೊಂಡಿದ್ದ ಶೃಂಗಸಭೆಯಲ್ಲಿ ಮಾತನಾಡಿದ ಅವರು, ‘ಪಾಶ್ಚಿಮಾತ್ಯ ರಾಷ್ಟ್ರಗಳು ಕಚ್ಚಾ ತೈಲದ ಉತ್ಪಾದನೆಯನ್ನು ಹೆಚ್ಚಿಸಿವೆ. ಈ ಬೆಳವಣಿಗೆಯು ಪೆಟ್ರೋಲಿಯಂ ಉತ್ಪನ್ನಗಳನ್ನು ರಫ್ತು ಮಾಡುವ ದೇಶಗಳ ಸಂಘಟನೆಗೆ (ಒಪೆಕ್‌) ತೈಲ ಉತ್ಪಾದನೆ ಹೆಚ್ಚಳಕ್ಕೆ ಪ್ರೇರಣೆ ನೀಡಲಿದೆ’ ಎಂದರು.

ಬ್ರೆಜಿಲ್‌, ಗಯಾನ ಕೂಡ ತೈಲದ ಉತ್ಪಾದನೆಯನ್ನು ಹೆಚ್ಚಿಸಿವೆ. ಇದರಿಂದ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಗೆ ತೈಲ ಪೂರೈಕೆಯಾಗಲಿದ್ದು, ಪರಿಸ್ಥಿತಿಯು ಸುಧಾರಿಸಲಿದೆ ಎಂದು ಹೇಳಿದರು.

ADVERTISEMENT

ಬೆಲೆ ಸ್ಥಿರತೆಯು ತೈಲ ಪೂರೈಕೆ ಮತ್ತು ಜಾಗತಿಕ ಬಿಕ್ಕಟ್ಟಿನ ಮೇಲೆ ಅವಲಂಬಿತವಾಗಿದೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.