ಮುಂಬೈ: ಚಿನ್ನದ ಬಾಂಡ್‌ನ 2021–22ನೇ ಹಣಕಾಸು ವರ್ಷದ ಆರನೇ ಕಂತು ಸೋಮವಾರದಿಂದ ಆರಂಭ ಅಗಲಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನೀಡಿಕೆ ಬೆಲೆಯನ್ನು ಪ್ರತಿ ಗ್ರಾಂಗೆ ₹ 4,732 ನಿಗದಿಪಡಿಸಿದೆ.
ಸೋಮವಾರ ಬಾಂಡ್ ಖರೀದಿ ಆರಂಭವಾಗಲಿದ್ದು ಶುಕ್ರವಾರ ಮುಕ್ತಾಯವಾಗಲಿದೆ. ಸೆಪ್ಟೆಂಬರ್ 3ರಂದು ಬಾಂಡ್ ವಿತರಣೆ ಆಗಲಿದೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಆನ್‌ಲೈನ್ ಮೂಲಕ ಬಾಂಡ್ ಖರೀದಿಗೆ ಅರ್ಜಿ ಸಲ್ಲಿಸುವವರಿಗೆ ₹ 50 ವಿನಾಯಿತಿ ಸಿಗಲಿದೆ. ಹೀಗಾಗಿ ಇವರಿಗೆ ಬಾಂಡ್ ಬೆಲೆಯು ಪ್ರತಿ ಗ್ರಾಂಗೆ ₹ 4,682 ಇರಲಿದೆ.
2021ರ ಮೇ ತಿಂಗಳಿನಿಂದ 2021ರ ಸೆಪ್ಟೆಂಬರ್‌ವರೆಗೆ ಒಟ್ಟು ಆರು ಕಂತುಗಳಲ್ಲಿ ಚಿನ್ನದ ಬಾಂಡ್ ಯೋಜನೆಯನ್ನು ಜಾರಿಗೊಳಿಸುವುದಾಗಿ ಕೇಂದ್ರ ಸರ್ಕಾರವು ಈಗಾಗಲೇ ಹೇಳಿದ್ದು, ಅದರಂತೆ ಕೊನೆಯ ಕಂತು ಸೋಮವಾರದಿಂದ ಆರಂಭವಾಗಲಿದೆ. ಕೇಂದ್ರ ಸರ್ಕಾರದ ಸಮ್ಮುಖದಲ್ಲಿ ಆರ್‌ಬಿಐ ಈ ಬಾಂಡ್‌ಗಳನ್ನು ವಿತರಣೆ ಮಾಡುತ್ತದೆ.
ಬ್ಯಾಂಕ್‌ಗಳು, ಆಯ್ದ ಅಂಚೆ ಕಚೇರಿ
ಗಳು, ಸ್ಟಾಕ್ ಹೋಲ್ಡಿಂಗ್ ಕಾರ್ಪೊ
ರೇಷನ್ ಆಫ್ ಇಂಡಿಯಾ, ರಾಷ್ಟ್ರೀಯ ಮತ್ತು ಮುಂಬೈ ಷೇರು ವಿನಿಮಯ ಕೇಂದ್ರಗಳಲ್ಲಿ ಈ ಬಾಂಡ್‌ಗಳನ್ನು ಮಾರಾಟ ಮಾಡಲಾಗುವುದು.
ಕನಿಷ್ಠ ಹೂಡಿಕೆ 1 ಗ್ರಾಂ ಇರಲಿದೆ. ವೈಯಕ್ತಿಕ ಖರೀದಿದಾರರಿಗೆ ಮತ್ತು ಹಿಂದೂ ಅವಿಭಕ್ತ ಕುಟುಂಬಕ್ಕೆ 4 ಕೆ.ಜಿ ಹಾಗೂ ಟ್ರಸ್ಟ್‌ಗಳಿಗೆ 20 ಕೆ.ಜಿಯ ಗರಿಷ್ಠ ಮಿತಿ ನೀಡಲಾಗಿದೆ.
2020–21ನೇ ಹಣಕಾಸು ವರ್ಷದಲ್ಲಿ 12 ಕಂತುಗಳ ಮೂಲಕ ಒಟ್ಟಾರೆ ₹ 16,049 ಕೋಟಿಯನ್ನು ಸಂಗ್ರಹಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.