ADVERTISEMENT

ಚಿನ್ನ, ಬೆಳ್ಳಿ ಧಾರಣೆ ಇಳಿಕೆ

ಪಿಟಿಐ
Published 26 ಜೂನ್ 2024, 14:30 IST
Last Updated 26 ಜೂನ್ 2024, 14:30 IST
<div class="paragraphs"><p>ಚಿನ್ನ, ಬೆಳ್ಳಿ</p></div>

ಚಿನ್ನ, ಬೆಳ್ಳಿ

   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ಧಾರಣೆಯಲ್ಲಿ ಇಳಿಕೆಯಾಗಿದೆ.

ಚಿನ್ನವು ಪ್ರತಿ 10 ಗ್ರಾಂಗೆ ₹250 ಕಡಿಮೆಯಾಗಿ ₹72,300ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹900 ಇಳಿಕೆಯಾಗಿ, ₹90,600 ಆಗಿದೆ.

ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,316 ಡಾಲರ್‌ (ಅಂದಾಜು ₹1.93 ಲಕ್ಷ) ಮತ್ತು 28.95 ಡಾಲರ್‌ನಂತೆ (ಅಂದಾಜು ₹2,419) ಮಾರಾಟವಾಗಿದೆ.

ಅಮೆರಿಕದ ಫೆಡರಲ್‌ ರಿಸರ್ವ್‌ನಿಂದ ಬಡ್ಡಿ ದರ ಕಡಿತದ ಮುನ್ಸೂಚನೆ ಹಾಗೂ ಡಾಲರ್‌ ಮೌಲ್ಯದಲ್ಲಿ ಏರಿಕೆಯಿಂದಾಗಿ ಹಳದಿ ಲೋಹದ ಬೆಲೆ ಇಳಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.