ADVERTISEMENT

Gold Rate: ಮತ್ತೆ ಇಳಿಕೆಯ ಹಾದಿ ಹಿಡಿದ ಚಿನ್ನದ ದರ

ಪಿಟಿಐ
Published 25 ಅಕ್ಟೋಬರ್ 2024, 13:23 IST
Last Updated 25 ಅಕ್ಟೋಬರ್ 2024, 13:23 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಕಳೆದ ಒಂದು ವಾರದಿಂದ ಏರಿಕೆಯ ಪಥದಲ್ಲಿ ಚಲಿಸುತ್ತಿದ್ದ ಚಿನ್ನ ಮತ್ತು ಬೆಳ್ಳಿ ಧಾರಣೆಯು, ಇಳಿಕೆಯ ಹಾದಿ ಹಿಡಿದಿದೆ.

ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ 10 ಗ್ರಾಂ ಚಿನ್ನದ ಬೆಲೆಯು ₹1,150 ಕಡಿಮೆಯಾಗಿದ್ದು, ₹80,050 ಆಗಿದೆ. ಬೆಳ್ಳಿ ಧಾರಣೆಯು ಕೆ.ಜಿ ₹2 ಸಾವಿರ ಕಡಿಮೆಯಾಗಿದ್ದು, ₹99 ಸಾವಿರ ಆಗಿದೆ ಎಂದು ಅಖಿಲ ಭಾರತ ಸರಾಫ್‌ ಅಸೋಸಿಯೇಷನ್‌ ತಿಳಿಸಿದೆ.

ಮಾರುಕಟ್ಟೆಯಲ್ಲಿ ಖರೀದಿ ಹೆಚ್ಚಳದಿಂದಾಗಿ ಬೆಳ್ಳಿ ಧಾರಣೆಯು ₹1 ಲಕ್ಷ ದಾಟಿತ್ತು. 

ADVERTISEMENT

‘ಸ್ಥಳೀಯ ಮಾರುಕಟ್ಟೆಯಲ್ಲಿ ಆಭರಣ ತಯಾರಕರು ಮತ್ತು ಚಿಲ್ಲರೆ ಮಾರಾಟಗಾರರಿಂದ ಬೇಡಿಕೆ ಕಡಿಮೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲೂ ಬೆಲೆ ಇಳಿಕೆಯಾಗಿದೆ. ಹಾಗಾಗಿ, ಹಳದಿ ಲೋಹದ ಬೆಲೆಯಲ್ಲಿ ಕಡಿಮೆಯಾಗಿದೆ’ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.