ADVERTISEMENT

ಚಿನ್ನದ ದರ: ಮೂರು ದಿನದಲ್ಲಿ ₹1,350 ಇಳಿಕೆ

ಪಿಟಿಐ
Published 10 ಅಕ್ಟೋಬರ್ 2024, 14:29 IST
Last Updated 10 ಅಕ್ಟೋಬರ್ 2024, 14:29 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರವೂ ಚಿನ್ನದ ಧಾರಣೆಯು ಇಳಿಕೆಯಾಗಿದೆ.

10 ಗ್ರಾಂ ಚಿನ್ನದ ಬೆಲೆಯು ₹350 ಇಳಿಕೆಯಾಗಿದ್ದು, ₹77,350ಕ್ಕೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ಪ್ರತಿ ಕೆ.ಜಿಗೆ ₹300 ಏರಿಕೆಯಾಗಿದ್ದು, ₹91,500 ಆಗಿದೆ ಎಂದು ಅಖಿಲ ಭಾರತ ಸರಾಫ್‌ ಅಸೋಸಿಯೇಷನ್‌ ತಿಳಿಸಿದೆ.  

ADVERTISEMENT

ಸತತ ಮೂರು ದಿನದ ವಹಿವಾಟಿನಲ್ಲಿ 10 ಗ್ರಾಂ ಚಿನ್ನದ ದರದಲ್ಲಿ ₹1,350 ಇಳಿಕೆಯಾಗಿದೆ.

‘ದೇಶೀಯ ಆಭರಣ ತಯಾರಕರು ಮತ್ತು ದಾಸ್ತಾನುಗಾರರಿಂದ ಬೇಡಿಕೆ ಕಡಿಮೆಯಾಗಿರುವುದೇ ದರ ಕುಸಿತಕ್ಕೆ ಕಾರಣವಾಗಿದೆ’ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

‘ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಆದ ಫೆಡರಲ್‌ ರಿಸರ್ವ್‌ನಿಂದ ಬಡ್ಡಿದರ ಕಡಿತ ಮಾಡುವ ಸಾಧ್ಯತೆಯಿದೆ. ಮತ್ತೊಂದೆಡೆ ಡಾಲರ್‌ ಮೌಲ್ಯದಲ್ಲಿ ಏರಿಕೆಯಾಗುತ್ತಿದೆ. ಹಾಗಾಗಿ, ಚಿನ್ನದ ದರದಲ್ಲಿ ಇಳಿಕೆಯಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.