ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ಧಾರಣೆಯಲ್ಲಿ ಭಾರಿ ಏರಿಕೆಯಾಗಿದೆ.
ಬೆಳ್ಳಿ ಧಾರಣೆಯು ಕೆ.ಜಿಗೆ ₹3 ಸಾವಿರ ಏರಿಕೆಯಾಗಿ ₹93 ಸಾವಿರಕ್ಕೆ ಮುಟ್ಟಿದೆ. ಚಿನ್ನದ ದರವು 10 ಗ್ರಾಂಗೆ ₹900 ಹೆಚ್ಚಳವಾಗಿ ₹77,850ರಂತೆ ಮಾರಾಟವಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ದರ ಹೆಚ್ಚಳಕ್ಕೆ ಕಾರಣ ಏನು?: ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರವನ್ನು ಕಡಿತಗೊಳಿಸಿದೆ. ಮತ್ತೊಂದೆಡೆ ಡಾಲರ್ ಮೌಲ್ಯ ಇಳಿಕೆಯಾಗಿದೆ. ವಿವಿಧ ದೇಶದ ಕೇಂದ್ರೀಯ ಬ್ಯಾಂಕ್‌ಗಳು ಬಡ್ಡಿದರ ಕಡಿತಗೊಳಿಸುವ ನಿರೀಕ್ಷೆಯಿದೆ. ಜಾಗತಿಕ ಬಿಕ್ಕಟ್ಟಿನಿಂದಾಗಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾದ ಹಳದಿ ಲೋಹದತ್ತ ದೃಷ್ಟಿ ನೆಟ್ಟಿದ್ದಾರೆ. ಇದರಿಂದ ಬೆಲೆ ಏರಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಹಬ್ಬದ ಋತುವಿನ ಅಂಗವಾಗಿ ದೇಶೀಯ ಆಭರಣ ತಯಾರಕರು ಮತ್ತು ಗ್ರಾಹಕರಿಂದ ಬೇಡಿಕೆ ಹೆಚ್ಚಿರುವುದು ಕೂಡ ಚಿನ್ನದ ದರ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.