ಮುಂಬೈ: ದೇಶದ ಚಿನ್ನದ ಆಮದು ಸತತ ನಾಲ್ಕನೇ ತಿಂಗಳಿನಲ್ಲಿಯೂ ಇಳಿಕೆ ಕಂಡಿದೆ.
2018ರ ಅಕ್ಟೋಬರ್‌ನಲ್ಲಿ 57 ಟನ್ ಆಮದಾಗಿತ್ತು. 2019ರಲ್ಲಿ 38 ಟನ್‌ಗಳಿಗೆ ಅಂದರೆ ಶೇ 33ರಷ್ಟು ಇಳಿಕೆಯಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಆದರೆ, ಮೌಲ್ಯದ ಲೆಕ್ಕದಲ್ಲಿ₹ 12,496ಕೋಟಿಗಳಿಂದ ₹ 13,064 ಕೋಟಿಗಳಿಗೆ ಏರಿಕೆಯಾಗಿದೆ.
ಚಿನ್ನದ ದರ ಗರಿಷ್ಠ ಮಟ್ಟದಲ್ಲಿ ಇರುವುದರಿಂದ ಹಬ್ಬದ ಸಂದರ್ಭದಲ್ಲಿ ಬೇಡಿಕೆ ಕಡಿಮೆ ಆಗಿದೆ ಎಂದು ಮಾಹಿತಿ ನೀಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.