ADVERTISEMENT

ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚು ಬೇಡಿಕೆ: ಚಿನ್ನ, ಬೆಳ್ಳಿ ದರ ಏರಿಕೆ

ಪಿಟಿಐ
Published 18 ಅಕ್ಟೋಬರ್ 2024, 14:03 IST
Last Updated 18 ಅಕ್ಟೋಬರ್ 2024, 14:03 IST
   

ನವದೆಹಲಿ: ಹಬ್ಬ‌ದ ಋತುವಿನ ಅಂಗವಾಗಿ ಬೇಡಿಕೆ ಹೆಚ್ಚಿದ್ದರಿಂದ ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಧಾರಣೆಯಲ್ಲಿ ಏರಿಕೆಯಾಗಿದೆ.

ಚಿನ್ನದ ದರವು 10 ಗ್ರಾಂಗೆ ₹550 ಹೆಚ್ಚಳವಾಗಿ ₹79,900ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ಕೆ.ಜಿಗೆ ₹1 ಸಾವಿರ ಏರಿಕೆಯಾಗಿ ₹94,500ಕ್ಕೆ ಮುಟ್ಟಿದೆ ಎಂದು ಅಖಿಲ ಭಾರತ ಸರಾಫ್‌ ಅಸೋಸಿಯೇಷನ್‌ ತಿಳಿಸಿದೆ.

‘ಹಬ್ಬದ ಅಂಗವಾಗಿ ದೇಶೀಯ ಮಾರುಕಟ್ಟೆಯಲ್ಲಿ ಗ್ರಾಹಕರಿಂದ ಖರೀದಿ ಹೆಚ್ಚಳವಾಗಿದೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮತ್ತು ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಹೂಡಿಕೆದಾರರು ಹಳದಿ ಲೋಹ ಸುರಕ್ಷಿತವೆಂದು ಭಾವಿಸಿದ್ದು, ಇದರ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಹಾಗಾಗಿ, ಚಿನ್ನದ ದರ ಏರಿಕೆಯಾಗಿದೆ’ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.