ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ ಏರಿಕೆಯಾಗಿದ್ದರೆ, ಬೆಳ್ಳಿ ಧಾರಣೆ ಯಥಾಸ್ಥಿತಿಯಲ್ಲಿದೆ.
ಚಿನ್ನದ ದರವು 10 ಗ್ರಾಂಗೆ ₹450 ಏರಿಕೆಯಾಗಿ, ₹79,350ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ಕೆ.ಜಿಗೆ ₹93,500 ಇದೆ. ಆಭರಣ ತಯಾರಕರಿಂದ ಖರೀದಿ ಹೆಚ್ಚಳವಾಗಿರುವುದೇ ಹಳದಿ ಲೋಹದ ಬೆಲೆ ಏರಿಕೆಗೆ ಕಾರಣ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರವು ₹80,450 ಮತ್ತು ಕೆ.ಜಿ ಬೆಳ್ಳಿ ಧಾರಣೆ ₹96,600 ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.