ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಮಂಗಳವಾರ ಮತ್ತೆ ಏರಿಕೆಯಾಗಿದೆ.
10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹600 ಏರಿಕೆಯಾಗಿದ್ದು, ₹78,050 ಆಗಿದೆ. ಸ್ಟ್ಯಾಂಡರ್ಡ್ ಚಿನ್ನದ (ಶೇ 99.5 ಶುದ್ಧತೆ) ದರವು 10 ಗ್ರಾಂಗೆ ಇಷ್ಟೇ ಪ್ರಮಾಣದಲ್ಲಿ ಹೆಚ್ಚಳವಾಗಿ, ₹77,650 ಆಗಿದೆ.
ಬೆಳ್ಳಿ ದರವು ಕೆ.ಜಿಗೆ ₹1,500 ಏರಿಕೆಯಾಗಿದ್ದು, ₹93,500ರಂತೆ ಮಾರಾಟವಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಮದುವೆ ಋತುವಿನ ಅಂಗವಾಗಿ ಸ್ಥಳೀಯ ಆಭರಣ ತಯಾರಕರು ಮತ್ತು ಗ್ರಾಹಕರಿಂದ ಚಿನ್ನ ಖರೀದಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಹಳದಿ ಲೋಹದ ದರದಲ್ಲಿ ಹೆಚ್ಚಳವಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.