ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನ, ಬೆಳ್ಳಿ ಧಾರಣೆ ಇಳಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 302ರಷ್ಟು ಇಳಿಕೆಯಾಗಿ ₹ 46,814ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 597ರಷ್ಟು ಕಡಿಮೆ ಆಗಿ ₹ 61,222ರಂತೆ ಮಾರಾಟವಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.