ನವದೆಹಲಿ: ದೇಶೀಯ ಆಭರಣ ತಯಾರಕರು ಮತ್ತು ಗ್ರಾಹಕರಿಂದ ಬೇಡಿಕೆ ಕಡಿಮೆಯಾಗಿರುವುದರಿಂದ ಚಿನ್ನ ಮತ್ತು ಬೆಳ್ಳಿ ಧಾರಣೆಯು ಬುಧವಾರದ ವಹಿವಾಟಿನಲ್ಲಿ ಇಳಿಕೆಯಾಗಿದೆ.
ಇಲ್ಲಿನ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ ದರವು ₹600 ಇಳಿಕೆಯಾಗಿ, ₹77,700ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ಕೆ.ಜಿಗೆ ₹2,800 ಕಡಿಮೆಯಾಗಿ ₹91,200ಕ್ಕೆ ಇಳಿದಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರವು ₹79 ಸಾವಿರ ಮತ್ತು ಕೆ.ಜಿ ಬೆಳ್ಳಿ ದರವು ₹94,100 ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.