ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ ಏರಿಕೆ ಆಗಿದ್ದರೆ, ಬೆಳ್ಳಿ ದರ ಇಳಿಕೆ ಕಂಡಿದೆ.10ಗ್ರಾಂ ಚಿನ್ನದ ದರ ₹ 182ರಷ್ಟು ಹೆಚ್ಚಾಗಿ ₹ 47,023ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 178ರಷ್ಟು ಇಳಿಕೆಯಾಗಿ ₹ 64,721ಕ್ಕೆ ತಲುಪಿತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆ ಕಂಡಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಕಂಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.