ADVERTISEMENT

Silver Price: ಬೆಳ್ಳಿ ಕೆ.ಜಿಗೆ ₹1 ಸಾವಿರ ಇಳಿಕೆ

ಪಿಟಿಐ
Published 23 ಸೆಪ್ಟೆಂಬರ್ 2024, 14:25 IST
Last Updated 23 ಸೆಪ್ಟೆಂಬರ್ 2024, 14:25 IST
<div class="paragraphs"><p>ಬೆಳ್ಳಿ(ಪ್ರಾತಿನಿಧಿಕ ಚಿತ್ರ)</p></div>

ಬೆಳ್ಳಿ(ಪ್ರಾತಿನಿಧಿಕ ಚಿತ್ರ)

   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ ಏರಿಕೆಯಾಗಿದ್ದರೆ, ಬೆಳ್ಳಿ ಧಾರಣೆಯು ಇಳಿಕೆಯಾಗಿದೆ.

10 ಗ್ರಾಂ ಚಿನ್ನದ ದರವು ₹600 ಏರಿಕೆಯಾಗಿ ₹76,950ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹1 ಸಾವಿರ ಕಡಿಮೆಯಾಗಿ ₹90 ಸಾವಿರಕ್ಕೆ ಇಳಿದಿದೆ ಎಂದು ಅಖಿಲ ಭಾರತ ಸರಾಫ್‌ ಅಸೋಸಿಯೇಷನ್‌ ತಿಳಿಸಿದೆ.

ADVERTISEMENT

ದೇಶೀಯ ಆಭರಣ ತಯಾರಕರು ಮತ್ತು ಚಿಲ್ಲರೆ ಮಾರಾಟಗಾರರಿಂದ ಹೆಚ್ಚಿದ ಬೇಡಿಕೆ, ಡಾಲರ್‌ ಮೌಲ್ಯ ಇಳಿಕೆಯಿಂದ ಹಳದಿ ಲೋಹದ ದರವು ಏರಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.