ನವದೆಹಲಿ: ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಧಾರಣೆಯು ಏರಿಕೆಯಾಗಿದೆ.
10 ಗ್ರಾಂ ಚಿನ್ನದ ದರವು ₹1,200 ಏರಿಕೆಯಾಗಿ ₹75,550ಕ್ಕೆ ಮಾರಾಟವಾಗಿದೆ. ಇದು ಎರಡು ತಿಂಗಳ ಗರಿಷ್ಠ ದರವಾಗಿದೆ.
ಬೆಳ್ಳಿ ಧಾರಣೆ ಕೆ.ಜಿಗೆ ₹2 ಸಾವಿರ ಹೆಚ್ಚಳವಾಗಿ ₹89 ಸಾವಿರಕ್ಕೆ ಮುಟ್ಟಿದೆ. ಕಳೆದ ನಾಲ್ಕು ದಿನದ ವಹಿವಾಟಿನಲ್ಲಿ ಬೆಳ್ಳಿ ದರದಲ್ಲಿ ₹5,200 ಏರಿಕೆಯಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಮುಂದಿನ ವಾರ ಅಮೆರಿಕ ಕೇಂದ್ರೀಯ ಬ್ಯಾಂಕ್ ಆದ ಫೆಡರಲ್ ರಿಸರ್ವ್ ಬ್ಯಾಂಕ್ ಬಡ್ಡಿದರ ಕಡಿತಗೊಳಿಸುವ ನಿರೀಕ್ಷೆಯಿದೆ. ಡಾಲರ್ ಮೌಲ್ಯ ಇಳಿಕೆಯಾಗಿದೆ. ಹಬ್ಬದ ಋತುವಿನ ಅಂಗವಾಗಿ ಗ್ರಾಹಕರಿಂದ ಖರೀದಿ ಹೆಚ್ಚಿದೆ. ಹಾಗಾಗಿ, ಹಳದಿ ಲೋಹದ ಬೆಲೆ ಏರಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.