ADVERTISEMENT

Gold Rate: ಚಿನ್ನ, ಬೆಳ್ಳಿ ಬೆಲೆ ಇಳಿಕೆ

ಪಿಟಿಐ
Published 14 ನವೆಂಬರ್ 2024, 13:05 IST
Last Updated 14 ನವೆಂಬರ್ 2024, 13:05 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಇಳಿಕೆಯಾಗಿದೆ. 

10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹700 ಇಳಿಕೆಯಾಗಿದ್ದು, ₹77,050 ಆಗಿದೆ. ಸ್ಟ್ಯಾಂಡರ್ಡ್‌ ಚಿನ್ನದ (ಶೇ 99.5 ಶುದ್ಧತೆ) ದರವು 10 ಗ್ರಾಂಗೆ ಇಷ್ಟೇ ಪ್ರಮಾಣದಲ್ಲಿ ಕಡಿಮೆಯಾಗಿದ್ದು, ₹76,650 ಆಗಿದೆ.

ಬೆಳ್ಳಿ ಧಾರಣೆಯು ಕೆ.ಜಿಗೆ ₹2,310 ಇಳಿಕೆಯಾಗಿದ್ದು, ₹90,190ಕ್ಕೆ ಮಾರಾಟವಾಗಿದೆ. 

ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆಗಿಂತಲೂ ಚಿನ್ನದ ಪೂರೈಕೆಯಲ್ಲಿ ಏರಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ ಚಿಲ್ಲರೆ ಹಣದುಬ್ಬರವು ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಆದ ಫೆಡರಲ್‌ ರಿಸರ್ವ್‌ನ ನಿಗದಿತ ಗುರಿಗಿಂತಲೂ ಹೆಚ್ಚು ದಾಖಲಾಗಿದ್ದರೂ ಬಡ್ಡಿದರ ಕಡಿತಗೊಳಿಸಿತ್ತು. ಆದರೆ, ಹಣದುಬ್ಬರದ ಏರಿಕೆಯಿಂದಾಗಿ ಮುಂದಿನ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಬಡ್ಡಿದರ ಕಡಿತಗೊಳಿಸುವುದಕ್ಕೆ ತಾತ್ಕಾಲಿಕ ವಿರಾಮ ನೀಡುವ ಸಾಧ್ಯತೆಯಿದೆ. ಹಾಗಾಗಿ, ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.