ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಮತ್ತು ಸ್ಥಳೀಯ ಆಭರಣ ತಯಾರಕರಿಂದ ಬೇಡಿಕೆ ಕುಗ್ಗಿರುವುದರಿಂದ ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಇಳಿಕೆಯಾಗಿದೆ.
ಚಿನ್ನದ ದರವು 10 ಗ್ರಾಂಗೆ ₹1,650 ಇಳಿಕೆಯಾಗಿ, ₹79,500 ಆಗಿದೆ. ಬೆಳ್ಳಿ ದರವು ಕೆ.ಜಿಗೆ ₹2,900 ಕಡಿಮೆಯಾಗಿ, ₹93,800ರಂತೆ ಮಾರಾಟವಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
‘ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಡೊನಾಲ್ಡ್ ಟ್ರಂಪ್, ವ್ಯಾಪಾರ ವರ್ಗದ ಪರವಾಗಿ ಹೆಚ್ಚು ಒಲವು ಹೊಂದಿದ್ದಾರೆ. ಹಾಗಾಗಿ, ಹೂಡಿಕೆದಾರರು ಹಳದಿ ಲೋಹದ ಬದಲಿಗೆ ಬಿಟ್‌ಕಾಯಿನ್ ಮತ್ತು ಈಕ್ವಿಟಿಗಳಲ್ಲಿ ಹೂಡಿಕೆಗೆ ಮುಂದಾಗಿದ್ದಾರೆ. ಇದರಿಂದ ಚಿನ್ನದ ಬೆಲೆಯು ಇಳಿಕೆಯಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.
ಅಮೆರಿಕದ ಬಾಂಡ್ ಗಳಿಕೆ ಮತ್ತು ಡಾಲರ್ ಮೌಲ್ಯದ ಏರಿಕೆ ಕೂಡ ಹಳದಿ ಲೋಹದ ದರದ ಇಳಿಕೆಯ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.