ADVERTISEMENT

ಚಿನ್ನ: 10 ಗ್ರಾಂಗೆ ₹1,100 ಏರಿಕೆ

ಪಿಟಿಐ
Published 22 ನವೆಂಬರ್ 2024, 13:00 IST
Last Updated 22 ನವೆಂಬರ್ 2024, 13:00 IST
ಚಿನ್ನ ಆಮದು ಶೇ 78 ಏರಿಕೆ
ಚಿನ್ನ ಆಮದು ಶೇ 78 ಏರಿಕೆ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆಯಾಗಿದೆ.

10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹1,100 ಏರಿಕೆಯಾಗಿದ್ದು, ₹80,400 ಆಗಿದೆ. ಸ್ಟ್ಯಾಂಡರ್ಡ್‌ ಚಿನ್ನದ (ಶೇ 99.5 ಶುದ್ಧತೆ) ದರವು ಇಷ್ಟೇ ಪ್ರಮಾಣದಲ್ಲಿ ಹೆಚ್ಚಳವಾಗಿ, ₹80 ಸಾವಿರ ಆಗಿದೆ.

ಬೆಳ್ಳಿ ಧಾರಣೆಯು ಕೆ.ಜಿಗೆ ₹300 ಏರಿಕೆಯಾಗಿ, ₹93,300ರಂತೆ ಮಾರಾಟವಾಗಿದೆ ಎಂದು ಅಖಿಲ ಭಾರತ ಸರಾಫ್‌ ಅಸೋಸಿಯೇಷನ್‌ ತಿಳಿಸಿದೆ.

ADVERTISEMENT

‘ಮದುವೆ ಋತುವಿನ ಆರಂಭಗೊಂಡಿದ್ದು, ಆಭರಣ ತಯಾರಕರು ಮತ್ತು ಗ್ರಾಹಕರಿಂದ ಬೇಡಿಕೆ ಹೆಚ್ಚಿದೆ. ಇದರಿಂದ ಚಿನ್ನದ ದರವು ಏರಿಕೆಯಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.