ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಇಳಿಕೆಯಾಗಿದೆ.
10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹1,000 ಇಳಿಕೆಯಾಗಿದ್ದು, ₹79,400 ಆಗಿದೆ. ಸ್ಟ್ಯಾಂಡರ್ಡ್ ಚಿನ್ನದ (ಶೇ 99.5 ಶುದ್ಧತೆ) ದರವು ಇಷ್ಟೇ ಪ್ರಮಾಣದಲ್ಲಿ ಕಡಿಮೆಯಾಗಿ, ₹79 ಸಾವಿರ ಆಗಿದೆ.
ಬೆಳ್ಳಿ ಧಾರಣೆಯು ಕೆ.ಜಿಗೆ ₹1,600 ಇಳಿದು, ₹91,700ರಂತೆ ಮಾರಾಟವಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಹಳದಿ ಲೋಹದ ದರ ಇಳಿಕೆಯಾಗಿದೆ. ಹೀಗಾಗಿ, ದೇಶೀಯ ಮಾರುಕಟ್ಟೆಯಲ್ಲೂ ದರ ಕಡಿಮೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.