ADVERTISEMENT

ಚಿನ್ನದ ದರ ₹875, ಬೆಳ್ಳಿ ₹760 ಇಳಿಕೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2024, 15:33 IST
Last Updated 22 ಮಾರ್ಚ್ 2024, 15:33 IST
<div class="paragraphs"><p>ಚಿನ್ನ</p></div>

ಚಿನ್ನ

   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ದರ ಇಳಿಕೆ ಆಗಿದೆ. ಚಿನ್ನದ ದರ 10 ಗ್ರಾಂ. ಗೆ ₹875 ಇಳಿಕೆಯಾಗಿ ₹66,575ರಂತೆ ಮಾರಾಟವಾಯಿತು.

ಬೆಳ್ಳಿ ಧಾರಣೆ ಕೆ.ಜಿಗೆ ₹760 ಹೆಚ್ಚಳವಾಗಿ ₹76,900ಕ್ಕೆ ಮುಟ್ಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ
ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,167 ಡಾಲರ್‌ ಮತ್ತು 24.45 ಡಾಲರ್‌ನಂತೆ ಮಾರಾಟವಾಗಿವೆ.

ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿದ್ದು, ದೇಶೀಯ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ದಿಲೀಪ್‌ ಪರ್ಮಾರ್‌ ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.