ನವದೆಹಲಿ: ಧನ್‌ತೇರಸ್ ಶುಭ ಸಂದರ್ಭದಲ್ಲಿ ಆಭರಣ ಖರೀದಿಗೆ ಗ್ರಾಹಕರು ಉತ್ಸಾಹ ತೋರಿದ ಪರಿಣಾಮ ಚಿನ್ನದ ಬೆಲೆ ₹300ರಷ್ಟು ಹೆಚ್ಚಳವಾಗಿದೆ. ಇದರಿಂದಾಗಿ ಪ್ರತಿ 10 ಗ್ರಾಂ ಅಪರಂಜಿ ಚಿನ್ನದ ಬೆಲೆ ₹81,400ಕ್ಕೆ ಏರಿಕೆಯಾಗಿದೆ ಎಂದು ಅಖಿಲ ಭಾರತ ಸರಾಫ್ ಒಕ್ಕೂಟ ಹೇಳಿದೆ.
ಬೆಳ್ಳಿಯ ಬೆಲೆಯೂ ₹200 ಹೆಚ್ಚಳವಾಗಿದ್ದು, ಪ್ರತಿ ಕೆ.ಜಿ. ಶುದ್ಧ ಬೆಳ್ಳಿ ಬೆಲೆ ₹99,700ಕ್ಕೆ ಏರಿಕೆಯಾಗಿದೆ. ಕೈಗಾರಿಕೆಗಳಿಂದ ಹಾಗೂ ನಾಣ್ಯ ತಯಾರಕರಿಂದ ವ್ಯಾಪಕ ಬೇಡಿಕೆ ವ್ಯಕ್ತವಾದ ಬೆನ್ನಲ್ಲೇ ₹99,500ರಿಂದ ಬೆಳ್ಳಿ ಬೆಲೆ ಏರಿಕೆ ಕಂಡಿದೆ.
‘ಧನ್‌ತೇರಸ್ ಶುಭ ಸಂದರ್ಭದಲ್ಲಿ ಆಭರಣ ಬೇಡಿಕೆ ಹೆಚ್ಚಾಗಿದೆ. ಅಮೆರಿಕ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ಐರೋಪ್ಯ ರಾಷ್ಟ್ರಗಳಲ್ಲಿ ಚಿನ್ನದ ವಹಿವಾಟು ದಾಖಲೆ ಮಟ್ಟಕ್ಕೆ ಹೆಚ್ಚಳವಾಗಿದೆ. ಇದರಿಂದಾಗಿ ಬೆಲೆಬಾಳುವ ಲೋಹಗಳ ಬೆಲೆ ಏರಿಕೆ ಕಂಡಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
‘ರಷ್ಯಾ ಹಾಗೂ ಉಕ್ರೇನ್ ಮತ್ತು ಮಧ್ಯಪ್ರಾಚ್ಯದಲ್ಲಿ ಯುದ್ಧ ನಿಲ್ಲದ ಕಾರಣ ಅನ್ಯ ವಸ್ತುಗಳಿಗಿಂತ ಚಿನ್ನ ಹಾಗೂ ಬೆಳ್ಳಿ ಮೇಲಿನ ಹೂಡಿಕೆಗೆ ಜನ ಹೆಚ್ಚು ಆಸಕ್ತಿ ತೋರುತ್ತಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ’ ಎಂದು ಆಕ್ಸಿಸ್ ಸೆಕ್ಯುರಿಟೀಸ್‌ನ ದೇವೆಯಾ ಗಗ್ಲಾನಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.