ನವದೆಹಲಿ: ಭಾರತದ ಜೊತೆ ಗಡಿ ಹಂಚಿಕೊಂಡಿರುವ ದೇಶಗಳಿಗೆ ಸೇರಿದವರನ್ನು ಭಾರತದ ಕಂಪನಿಗಳ ನಿರ್ದೇಶಕರನ್ನಾಗಿ ನೇಮಿಸಲು ಸರ್ಕಾರದ ಒಪ್ಪಿಗೆ ಪಡೆಯುವುದು ಕಡ್ಡಾಯವಾಗಿದೆ. ಈ ಕುರಿತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಈ ಕುರಿತು ಕಂಪನಿ ಕಾಯ್ದೆ 2013ರ ಅಡಿಯಲ್ಲಿ ನಿರ್ದೇಶಕರ ನೇಮಕ ಮತ್ತು ಅರ್ಹತೆಗೆ ಸಂಬಂಧಿಸಿದ ನಿಯಮಗಳಲ್ಲಿ ತಿದ್ದುಪಡಿ ತರಲಾಗಿದೆ.
ಚೀನಾ, ಬಾಂಗ್ಲಾದೇಶ, ಪಾಕಿಸ್ತಾನ, ಭೂತಾನ, ನೇಪಾಳ, ಮ್ಯಾನ್ಮಾರ್ ಮತ್ತು ಆಫ್ಗಾನಿಸ್ತಾನ ಭಾರತದ ಜೊತೆ ಗಡಿ ಹಂಚಿಕೊಂಡಿವೆ. ಕೇಂದ್ರ ಗೃಹ ಸಚಿವಾಲಯದ ಅನುಮತಿ ಪಡೆಯದೇ ಇದ್ದರೆ ಅಂತಹವರ ನಿರ್ದೇಶಕರ ಗುರುತಿನ ಸಂಖ್ಯೆಯ (ಡಿಐಎನ್) ಅರ್ಜಿ ಮಾನ್ಯ ಆಗುವುದಿಲ್ಲ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.