ನವದೆಹಲಿ: ಮಾರುಕಟ್ಟೆಯಲ್ಲಿ ಬೆಲೆ ನಿಯಂತ್ರಿಸಲು ಪ್ರಸಕ್ತ ವರ್ಷದಲ್ಲಿ 5 ಲಕ್ಷ ಟನ್ ಈರುಳ್ಳಿ ಕಾಪು ದಾಸ್ತಾನಿಗೆ ನಿರ್ಧರಿಸಲಾಗಿದೆ. ಈ ಪೈಕಿ ಇಲ್ಲಿಯವರೆಗೆ 71 ಸಾವಿರ ಟನ್ ಸಂಗ್ರಹಣೆ ಮಾಡಲಾಗಿದೆ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಈರುಳ್ಳಿಯ ಸರಾಸರಿ ದರ ₹38.67 ಇದೆ. ಮಾರುಕಟ್ಟೆಯಲ್ಲಿ ಸಾಮಾನ್ಯ ದರ ₹40 ಇದೆ. ಬಹುತೇಕ ಭಾಗದಲ್ಲಿ ಮುಂಗಾರು ಮಳೆ ಸುರಿಯುತ್ತಿದೆ. ಹಾಗಾಗಿ, ಚಿಲ್ಲರೆ ಧಾರಣೆಯಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
‘ದೇಶದಲ್ಲಿ ರಾಬಿ ಅವಧಿಯಲ್ಲಿ ಈರುಳ್ಳಿ ಉತ್ಪಾದನೆಯಲ್ಲಿ ಶೇ 20ರಷ್ಟು ಕುಸಿತವಾಗಿದೆ. ಕಳೆದ ವರ್ಷಕ್ಕಿಂತಲೂ ಪ್ರಸಕ್ತ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಕಾಪು ದಾಸ್ತಾನು ಮಾಡಲಾಗುತ್ತಿದೆ’ ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.