ನವದೆಹಲಿ: ಕುಚ್ಚಿಲಕ್ಕಿ ಮೇಲೆ ವಿಧಿಸಿದ್ದ ರಫ್ತು ಸುಂಕವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.
ಸುಂಕವನ್ನು ಶೇ 10ರಿಂದ ಶೂನ್ಯಕ್ಕೆ ಇಳಿಸಲಾಗಿದ್ದು, ಈ ಆದೇಶವು ಮಂಗಳವಾರದಿಂದಲೇ ಜಾರಿಗೆ ಬಂದಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ಸುಂಕ ಕಡಿತಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ತಿಂಗಳು ಕೇಂದ್ರ ಸರ್ಕಾರವು ಬಾಸ್ಮತಿಯೇತರ ಅಕ್ಕಿಗೆ ರಫ್ತು ಸುಂಕದಿಂದ ವಿನಾಯಿತಿ ನೀಡಿತ್ತು. ಕುಚ್ಚಿಲಕ್ಕಿ ಮತ್ತು ಭತ್ತದ ಮೇಲೆ ವಿಧಿಸುತ್ತಿದ್ದ ಸುಂಕವನ್ನು ಶೇ 20ರಿಂದ ಶೇ 10ಕ್ಕೆ ಇಳಿಸಿತ್ತು. ಈಗ ಕುಚ್ಚಿಲಕ್ಕಿ ಮೇಲಿನ ಸುಂಕವನ್ನು ರದ್ದುಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.