ನವದೆಹಲಿ: ಬಂದರುಗಳ ನಡುವೆ ಸಂಪರ್ಕ ವೃದ್ಧಿಸಲು ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಯೋಜನೆಯ ಅಡಿ 101 ಯೋಜನೆಗಳನ್ನು ಗುರುತಿಸಲಾಗಿದೆ ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ವಾನಂದ ಸೋನೊವಾಲ್ ಗುರುವಾರ ತಿಳಿಸಿದ್ದಾರೆ.
ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಆಯೋಜಿಸಿದ್ದ ವರ್ಚುವಲ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, 111 ಜಲಮಾರ್ಗಗಳನ್ನು ‘ರಾಷ್ಟ್ರೀಯ ಜಲಮಾರ್ಗ’ಗಳು ಎಂದು ಘೋಷಿಸಲಾಗುವುದು ಎಂದೂ ಹೇಳಿದ್ದಾರೆ.
ಸಾರಿಗೆ ವೆಚ್ಚವನ್ನು ಕಡಿಮೆ ಮಾಡುವುದು ಭಾರತಕ್ಕೆ ಬಹಳ ಮುಖ್ಯ. ದೇಶದಲ್ಲಿ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಸರ್ಕಾರವು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸಾಗರಮಾಲಾ, ಭಾರತಮಾಲಾ ರೀತಿಯ ಮೂಲಸೌಕರ್ಯ ಯೋಜನೆಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಅವರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 13ರಂದು ಗತಿಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.