ADVERTISEMENT

ದೇಶದಲ್ಲಿ GDPಗೆ ತಕ್ಕಂತೆ ಉದ್ಯೋಗ ಸೃಷ್ಟಿಯಾಗುತ್ತಿಲ್ಲ: ರಘುರಾಂ ರಾಜನ್

ಪಿಟಿಐ
Published 29 ಸೆಪ್ಟೆಂಬರ್ 2024, 13:43 IST
Last Updated 29 ಸೆಪ್ಟೆಂಬರ್ 2024, 13:43 IST
<div class="paragraphs"><p>ರಘುರಾಂ ರಾಜನ್ </p></div>

ರಘುರಾಂ ರಾಜನ್

   

–ಪಿಟಿಐ ಚಿತ್ರ

ನವದೆಹಲಿ: ‘ಭಾರತದ ಜಿಡಿಪಿ ಶೇ 7ರಷ್ಟು ಬೆಳವಣಿಗೆಯಾಗುತ್ತಿದೆ. ಆದರೆ, ಇದಕ್ಕೆ ತಕ್ಕಂತೆ ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ. ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಲ್ಲಿಕೆಯಾಗುವ ಅರ್ಜಿಗಳ ಸಂಖ್ಯೆಯನ್ನು ಅವಲೋಕಿಸಿದರೆ ಈ ಸಂಗತಿ ವೇದ್ಯವಾಗುತ್ತದೆ’ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮಾಜಿ ಗವರ್ನರ್‌ ರಘುರಾಂ ರಾಜನ್‌ ಹೇಳಿದ್ದಾರೆ.

ADVERTISEMENT

‘ಕೇಂದ್ರ ಸರ್ಕಾರವು ಕಾರ್ಮಿಕರ ಸಂಖ್ಯೆಯನ್ನು ಹೆಚ್ಚು ಬೇಡುವ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡಬೇಕಿದೆ. ಆ ಮೂಲಕ ಉದ್ಯೋಗಾವಕಾಶ‌ಗಳನ್ನು ಸೃಷ್ಟಿಸಬೇಕಿದೆ’ ಎಂದು ಹೇಳಿದ್ದಾರೆ.

‘ದೇಶದಲ್ಲಿ ಉನ್ನತ ಸ್ತರದಲ್ಲಿ ಇರುವವರ ಆದಾಯ ಹೆಚ್ಚಿದೆ. ಹಾಗಾಗಿ, ಅವರು ಬದುಕು ಸುಖಕರವಾಗಿದೆ. ಆದರೆ, ದೇಶದ ಅರ್ಧದಷ್ಟು ಜನರ ದಿನಬಳಕೆಯ ವೆಚ್ಚವು ಕೋವಿಡ್‌ ಪೂರ್ವದ ಮಟ್ಟದಲ್ಲಿದ್ದ ಸ್ಥಿತಿಗೆ ಇನ್ನೂ ತಲುಪಿಲ್ಲ ಎಂದು ತಿಳಿಸಿದ್ದಾರೆ.

‘ದೇಶದ ಜಿಡಿಪಿ ಬೆಳವಣಿಗೆಗೆ ತಕ್ಕಂತೆ ಸಾಕಷ್ಟು ಉದ್ಯೋಗಗಳು ಸೃಷ್ಟಿಯಾಗುತ್ತಿವೆ ಎಂದು ನಾವು ಭಾವಿಸಿದ್ದೇವೆ. ಆದರೆ, ತಯಾರಿಕಾ ವಲಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚುತ್ತಿದೆ. ಆದರೆ, ಅಲ್ಲಿ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ ಎಂದು ಹೇಳಿದ್ದಾರೆ.

ಸರಕುಗಳು, ಯಂತ್ರೋಪಕರಣಗಳಿಗೆ ಹೆಚ್ಚು ಬಂಡವಾಳ ಹೂಡಿಕೆಯಾಗುವ ಕೈಗಾರಿಕೆಗಳ ಬೆಳವಣಿಗೆ ಹೆಚ್ಚುತ್ತಿದೆ. ಆದರೆ, ಕಾರ್ಮಿಕರ ಸಂಖ್ಯೆಯನ್ನು ಹೆಚ್ಚು ಬೇಡುವ ಕೈಗಾರಿಕೆಗಳು ಬೆಳವಣಿಗೆ ಕಾಣುತ್ತಿಲ್ಲ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.