ನವದೆಹಲಿ: ರಬ್ಬರ್ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸುವ ಯಾವುದೇ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ವಾಣಿಜ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅಮರದೀಪ್ ಸಿಂಗ್ ಭಾಟಿಯಾ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆ ದರದ ವ್ಯತ್ಯಾಸವನ್ನು ನಿರ್ವಹಣೆ ಮಾಡಲಾಗುತ್ತಿದೆ. ಹಾಗಾಗಿ, ಸುಂಕವನ್ನು ಕಡಿತಗೊಳಿಸುವುದಿಲ್ಲ ಎಂದು ಹೇಳಿದರು.
ದೇಶದಲ್ಲಿ 13 ಲಕ್ಷ ರಬ್ಬರ್ ತಯಾರಕರು ಇದ್ದಾರೆ. ಕೇರಳದಲ್ಲಿ ಅತಿಹೆಚ್ಚು ರಬ್ಬರ್ ಉತ್ಪಾದನೆಯಾಗುತ್ತಿದೆ. 2022–23ರಲ್ಲಿ 8.39 ಲಕ್ಷ ಟನ್ ಉತ್ಪಾದನೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.