ADVERTISEMENT

‘ಕ್ರಿಪ್ಟೊಕರೆನ್ಸಿ ಬಳಕೆ ಪರಿಶೀಲನೆ: ಸರ್ಕಾರ ಮುಕ್ತವಾಗಿದೆ; ಠಾಕೂರ್

ಪಿಟಿಐ
Published 6 ಮಾರ್ಚ್ 2021, 19:45 IST
Last Updated 6 ಮಾರ್ಚ್ 2021, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಆಡಳಿತದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕ್ರಿಪ್ಟೊಕರೆನ್ಸಿ ಸೇರಿದಂತೆ ಹೊಸ ತಂತ್ರಜ್ಞಾನಗಳ ಬಳಕೆಯನ್ನು ಪರಿಶೀಲಿಸಲು ಮತ್ತು ಮೌಲ್ಯಮಾಪನ ಮಾಡಲು ಸರ್ಕಾರ ಮುಕ್ತವಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಶನಿವಾರ ಹೇಳಿದ್ದಾರೆ.

ಆಡಳಿತದ ವಿವಿಧ ಆಯಾಮಗಳಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಅವರೇ ಸಮರ್ಥಿಸುತ್ತಾರೆ ಎಂದೂ ಅವರು ತಿಳಿಸಿದ್ದಾರೆ.

ಉದ್ಯಮಿಗಳ ಸಂಸ್ಥೆ ಇಒ ಪಂಜಾಬ್‌ ಅಯೋಜಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಾವಿನ್ಯತೆ ಮತ್ತು ಹೊಸ ತಂತ್ರಜ್ಞಾನವನ್ನು ನಾವು ಸ್ವಾಗತಿಸುತ್ತೇವೆ. ಬ್ಲಾಕ್‌ಚೇನ್ ಹೊಸ ಉದಯೋನ್ಮುಖ ತಂತ್ರಜ್ಞಾನವಾಗಿದೆ. ಕ್ರಿಪ್ಟೊಕರೆನ್ಸಿಯು ವರ್ಚುವಲ್ ಕರೆನ್ಸಿಯ ಒಂದು ರೂಪವಾಗಿದೆ. ನಾವು ಯಾವಾಗಲೂ ಹೊಸ ಆಲೋಚನೆಗಳನ್ನು ಮುಕ್ತ ಮನಸ್ಸಿನಿಂದ ಮೌಲ್ಯಮಾಪನ ಮಾಡಬೇಕು, ಅನ್ವೇಷಿಸಬೇಕು ಮತ್ತು ಪ್ರೋತ್ಸಾಹಿಸಬೇಕು ಎನ್ನುವುದನ್ನು ನಾನು ನಂಬುತ್ತೇನೆ’ ಎಂದು ಹೇಳಿದ್ದಾರೆ.

ADVERTISEMENT

ಡಿಜಿಟಲ್‌ ಕರೆನ್ಸಿಗೆ ಸಂಬಂಧಿಸಿದಂತೆ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯ ನೇತೃತ್ವದಲ್ಲಿ ಉನ್ನತ ಮಟ್ಟದ ಆಂತರಿಕ ಸಚಿವರ ಸಮಿತಿ (ಐಎಂಸಿ) ರಚಿಸಲಾಗಿದೆ. ಅದು ತನ್ನ ವರದಿಯನ್ನು ಸಲ್ಲಿಸಿದೆ. ಐಎಂಸಿ ನೀಡಿರುವ ಶಿಫಾರಸನ್ನು ಆಧರಿಸಿ ಸರ್ಕಾರವು ನಿರ್ಧಾರ ತೆಗೆದುಕೊಳ್ಳಲಿದೆ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.