ADVERTISEMENT

ಕೇಂದ್ರ ಸರ್ಕಾರದ ಒಟ್ಟು ಸಾಲದಲ್ಲಿ ಶೇ 5.6ರಷ್ಟು ಹೆಚ್ಚಳ

ಪಿಟಿಐ
Published 31 ಡಿಸೆಂಬರ್ 2020, 19:28 IST
Last Updated 31 ಡಿಸೆಂಬರ್ 2020, 19:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸೆಪ್ಟೆಂಬರ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕೇಂದ್ರ ಸರ್ಕಾರದ ಒಟ್ಟು ಸಾಲದಲ್ಲಿ ಶೇಕಡ 5.6ರಷ್ಟು ಹೆಚ್ಚಳವಾಗಿದೆ. ಕೇಂದ್ರದ ಸಾಲವು ₹ 107.04 ಲಕ್ಷ ಕೋಟಿಗೆ ಏರಿಕೆ ಕಂಡಿದೆ.

ಹಾಲಿ ಹಣಕಾಸು ವರ್ಷದ ಮೊದಲ ತ್ರೈಮಾಸಿಕದ ಕೊನೆಯ ಹೊತ್ತಿಗೆ ಸಾಲದ ಮೊತ್ತವು ₹ 101.3 ಲಕ್ಷ ಕೋಟಿ ಆಗಿತ್ತು. ಸಾಲದಲ್ಲಿ ಆಗಿರುವ ಹೆಚ್ಚಳವು ಕೋವಿಡ್–19 ಕಾರಣದಿಂದಾಗಿ ಆದಾಯ ಸಂಗ್ರಹದಲ್ಲಿ ಆಗಿರುವ ಕೊರತೆಯನ್ನು, ವೆಚ್ಚಗಳು ಹೆಚ್ಚುತ್ತಿರುವುದನ್ನು ತೋರಿಸುತ್ತಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT