ನವದೆಹಲಿ: ಬ್ಯಾಂಕ್‌ಗಳಲ್ಲಿನ ಠೇವಣಿಗಳಿಗೆ ಸದ್ಯಕ್ಕೆ ಇರುವ ವಿಮೆ ಪರಿಹಾರ ಮೊತ್ತವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಹಣಕಾಸು ಸಂಸ್ಥೆ, ಸಹಕಾರಿ ಬ್ಯಾಂಕ್ ಮತ್ತು ಬ್ಯಾಂಕ್‌ಗಳು ದಿವಾಳಿ ಎದ್ದ ಅಥವಾ ಆರ್‌ಬಿಐ ಅವುಗಳ ಲೈಸನ್ಸ್ ರದ್ದುಪಡಿಸಿದ ಸಂದರ್ಭದಲ್ಲಿ ಠೇವಣಿಗಳಿಗೆ ಸದ್ಯಕ್ಕೆ ಇರುವ ₹ 1 ಲಕ್ಷದ ವಿಮೆ ಪರಿಹಾರ ಮೊತ್ತವನ್ನು ₹ 2 ಲಕ್ಷಕ್ಕಿಂತ ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹಣಕಾಸು ಪರಿಹಾರ ಮತ್ತು ಠೇವಣಿ ವಿಮೆ (ಎಫ್‌ಆರ್‌ಡಿಐ) ಮಸೂದೆ ಮಂಡಿಸಲಾಗುತ್ತಿದೆ.
ಠೇವಣಿ ವಿಮೆ ಪರಿಹಾರ ಮೊತ್ತವನ್ನು ಈ ಹಿಂದೆ 1993ರಲ್ಲಿ ₹ 30 ಸಾವಿರದಿಂದ ₹ 1 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. ವಿಮೆ ಪರಿಹಾರ ಮೊತ್ತ ಹೆಚ್ಚಳದಿಂದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ಜನರ ವಿಶ್ವಾಸ ಹೆಚ್ಚಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.