ADVERTISEMENT

ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮೆ ಪ್ರೀಮಿಯಂ ಮೊತ್ತ ಏರಿಕೆ

ಪಿಟಿಐ
Published 31 ಮೇ 2022, 16:33 IST
Last Updated 31 ಮೇ 2022, 16:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ (ಪಿಎಂಜೆಜೆಬಿವೈ) ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯ (ಪಿಎಂಎಸ್‌ಬಿವೈ) ಪ್ರೀಮಿಯಂ ಮೊತ್ತವನ್ನು ಕೇಂದ್ರ ಸರ್ಕಾರವು ಹೆಚ್ಚಿಸಿದೆ.

ಪಿಎಂಜೆಜೆಬಿವೈ ಯೋಜನೆಯ ವಾರ್ಷಿಕ ಪ್ರೀಮಿಯಂ ಮೊತ್ತವು ₹ 436ಕ್ಕೆ ಹೆಚ್ಚಳವಾಗಿದೆ. ಇದು ₹ 330 ಆಗಿತ್ತು. ಪಿಎಂಎಸ್‌ಬಿವೈ ಯೋಜನೆಯ ವಾರ್ಷಿಕ ಪ್ರೀಮಿಯಂ ಮೊತ್ತವನ್ನು ₹ 20ಕ್ಕೆ ಏರಿಕೆ ಮಾಡಲಾಗಿದೆ. ಇದು ಮೊದಲು ₹ 12 ಆಗಿತ್ತು. ಹೊಸ ದರವು ಜೂನ್‌ 1ರಿಂದ ಜಾರಿಗೆ ಬರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT