ADVERTISEMENT

ಈರುಳ್ಳಿ ಮೇಲಿದ್ದ ಕನಿಷ್ಠ ರಫ್ತು ದರ ರದ್ದುಗೊಳಿಸಿದ ಕೇಂದ್ರ ಸರ್ಕಾರ

ಪಿಟಿಐ
Published 13 ಸೆಪ್ಟೆಂಬರ್ 2024, 13:39 IST
Last Updated 13 ಸೆಪ್ಟೆಂಬರ್ 2024, 13:39 IST
<div class="paragraphs"><p>ಈರುಳ್ಳಿ</p></div>

ಈರುಳ್ಳಿ

   

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಕೆಯ ಲಾಭ ಭಾರತೀಯ ರೈತರಿಗೆ ಲಭಿಸುವ ಉದ್ದೇಶದಿಂದ ಈರುಳ್ಳಿ ರಫ್ತಿಗೆ ನಿಗದಿಪಡಿಸಿದ್ದ ಕನಿಷ್ಠ ರಫ್ತು ದರವನ್ನು (ಎಂಇಪಿ) ಶುಕ್ರವಾರದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ರದ್ದುಪಡಿಸಿದೆ.

ಈ ಮೊದಲು ಕನಿಷ್ಠ ರಫ್ತು ದರವನ್ನು (ಎಂಇಪಿ) ಪ್ರತಿ ಟನ್‌ಗೆ ₹ 46,154ಕ್ಕೆ (550 ಡಾಲರ್‌) ನಿಗದಿಪಡಿಸಿತ್ತು. ಇದರಿಂದ ರೈತರು ತಮ್ಮ ಉತ್ಪನ್ನಗಳನ್ನು ಈ ದರಕ್ಕಿಂತ ಕಡಿಮೆ ದರದಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಮಾರಾಟ ಮಾಡುವಂತಿರಲಿಲ್ಲ.

ADVERTISEMENT

ದೇಶದಲ್ಲಿ ಈರುಳ್ಳಿ ಹೆಚ್ಚಾಗಿ ಬೆಳೆಯುವ ಪ್ರಮುಖ ರಾಜ್ಯವಾದ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲಿ, ಸರ್ಕಾರದಿಂದ ಈ ನಿರ್ಧಾರ ಹೊರಬಿದ್ದಿದೆ.

ಈ ಆದೇಶದ ರದ್ದಿನಿಂದಾಗಿ ಸರಕುಗಳನ್ನು ರಫ್ತು ಮಾಡಲು ಸಹಕಾರಿಯಾಗಿದೆ ಎಂದು ವಿದೇಶಿ ವ್ಯಾಪಾರದ ಮಹಾ ನಿರ್ದೇಶನಾಲಯ (ಡಿಜಿಎಫ್‌ಟಿ) ತಿಳಿಸಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.