ನವದೆಹಲಿ: ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಅಲಯನ್ಸ್ ಏರ್ ವಿಮಾನಯಾನ ಕಂಪನಿಗೆ ಕೇಂದ್ರ ಸರ್ಕಾರವು ಈಕ್ಟಿಟಿ ರೂಪದಲ್ಲಿ ₹300 ಕೋಟಿ ಹೂಡಿಕೆ ಮಾಡಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇದಕ್ಕೆ ಹಣಕಾಸು ಸಚಿವಾಲಯ ಒಪ್ಪಿಗೆ ನೀಡಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಲಯನ್ಸ್ ಏರ್ ಕಂಪನಿಯು ಈ ಮೊದಲು ಏರ್ ಇಂಡಿಯಾದ ಭಾಗವಾಗಿತ್ತು. ಸದ್ಯ ಎಐ ಅಸೆಟ್ ಹೋಲ್ಡಿಂಗ್ ಲಿಮಿಟೆಡ್ (ಎಐಎಎಚ್‌ಎಲ್) ಒಡೆತನದಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.