ನವದೆಹಲಿ: ಗ್ರಾಹಕರ ಹಿತದೃಷ್ಟಿಯಿಂದ ಚಿಲ್ಲರೆ ಮಾರುಕಟ್ಟೆಯಲ್ಲಿ ಗೋಧಿ ಬೆಲೆಯನ್ನು ನಿಯಂತ್ರಿಸುವ ಸಂಬಂಧ ಮಾರುಕಟ್ಟೆ ಮಧ್ಯಪ್ರವೇಶಿಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳುವ ಕುರಿತಂತೆ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಮಾರುಕಟ್ಟೆಯಲ್ಲಿನ ಬೆಲೆಯ ಮೇಲೆ ನಿಗಾವಹಿಸುವಂತೆ ಅಧಿಕಾರಿಗಳಿಗೆ ಸಚಿವ ಶಾ ಅವರು, ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದೆ.
ಸಚಿವಾಲಯದ ಅಂಕಿಅಂಶದ ಪ್ರಕಾರ, ಕಳೆದ ಒಂದು ವರ್ಷದ ಅವಧಿಯಲ್ಲಿ ಗೋಧಿ ಮತ್ತು ಗೋಧಿ ಹಿಟ್ಟಿನ ಬೆಲೆಯಲ್ಲಿ ಶೇ 2ರಷ್ಟು ಏರಿಕೆಯಾಗಿದೆ.
ಕಳೆದ ವರ್ಷಕ್ಕಿಂತಲೂ ಈ ವರ್ಷದಲ್ಲಿ ಸರ್ಕಾರವು ಹೆಚ್ಚಿನ ಪ್ರಮಾಣದಲ್ಲಿ ಗೋಧಿ ಕಾಪು ದಾಸ್ತಾನು ಮಾಡಿದೆ. ಪಡಿತರ ವಿತರಣೆ ಸೇರಿ ಇತರೆ ಕಲ್ಯಾಣ ಕಾರ್ಯಕ್ರಮಗಳಿಗೆ ವಾರ್ಷಿಕ 18.4 ದಶಲಕ್ಷ ಟನ್‌ನಷ್ಟು ಗೋಧಿಯ ಅಗತ್ಯವಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.