ಬೆಂಗಳೂರು: ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರ ವರೆಗೆ ವಿಸ್ತರಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರ ವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರವು ಖರೀದಿಗೆ ಅನುಮತಿ ನೀಡಿದೆ. ಪ್ರತಿ ಕ್ವಿಂಟಲ್‌ಗೆ ₹8,682 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ 20,450 ಟನ್ ಖರೀದಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.