ನವದೆಹಲಿ : 2019ರಲ್ಲಿಯೂ ದೇಶದ ಆರ್ಥಿಕತೆ ಉತ್ತಮ ಪ್ರಗತಿ ಪಥದಲ್ಲಿಯೇ ಮುಂದುವರಿಯಲಿದೆ ಎಂದು ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಹೇಳಿದೆ.
ಜಾಗತಿಕ ಪ್ರತಿಕೂಲ ಪರಿಸ್ಥಿತಿಗಳ ಹೊರತಾಗಿಯೂ2018ರಲ್ಲಿ ಅತ್ಯಂತ ವೇಗವಾಗಿ ಪ್ರಗತಿ ಸಾಧಿಸುತ್ತಿರುವ ಆರ್ಥಿಕತೆಯಾಗಿ ಭಾರತ ಹೊರಹೊಮ್ಮಿದೆ. ಹೀಗಾಗಿ 2019ರಲ್ಲಿಯೂ ಉತ್ತಮ ಬೆಳವಣಿಗೆ ಕಾಣುವ ನಿರೀಕ್ಷೆ ಇದೆ ಎಂದಿದೆ.
‘ಜಿಎಸ್‌ಟಿ ವ್ಯವಸ್ಥೆ ಸಂಪೂರ್ಣವಾಗಿ ಜಾರಿಗೆ ಬಂದಿದೆ. ಇಂಧನ, ರಿಯಲ್ ಎಸ್ಟೇಟ್ ವಲಯವನ್ನೂ ಜಿಎಸ್‌ಟಿ ವ್ಯಾಪ್ತಿಗೆ ತರಬೇಕಿದೆ. ಮೂಲಸೌಕರ್ಯ ವಲಯದಲ್ಲಿ ಹೂಡಿಕೆ ಹೆಚ್ಚಾಗುತ್ತಿದೆ. ಸುಧಾರಣಾ ನೀತಿಗಳಿಂದ ಸಕಾರಾತ್ಮಕ ಬೆಳವಣಿಗೆಗಳಾಗುತ್ತಿವೆ. ಸೇವಾ ವಲಯ ಪ್ರಗತಿ ಪಥದಲ್ಲಿದೆ. ಈ ಎಲ್ಲಾ ಅಂಶಗಳನ್ನು ಗಮನಿಸಿದರೆ 2019ರಲ್ಲಿ ಜಿಡಿಪಿ ಪ್ರಗತಿ ದರ ಶೇ 7.5ರಲ್ಲಿರಲಿದೆ’ ಎಂದು ಸಿಐಐ ಪ್ರಧಾನ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.