ಬೆಂಗಳೂರು: ಕೋವಿಡ್ ಎರಡನೇ ಅಲೆಯಿಂದ ತೊಂದರೆಗೆ ಸಿಲುಕಿರುವ ಜನರಿಗೆ ನೆರವಾಗಲು ಹಲವು ಕ್ರಮಗಳನ್ನು ಕೈಗೊಂಡಿರುವುದಾಗಿ ಜಿಆರ್‌ಟಿ ಜುವೆಲರ್ಸ್ ಹೇಳಿದೆ.
ತಮಿಳುನಾಡು ಮುಖ್ಯಮಂತ್ರಿ ಅವರ ಸಾರ್ವಜನಿಕ ಪರಿಹಾರ ನಿಧಿಗೆ ಹಣ ನೀಡುವ ಜೊತೆಗೆ ಚೆನ್ನೈನ ಕೆ.ಕೆ. ನಗರದಲ್ಲಿ ಇರುವ ಇಎಸ್‌ಐ ಆಸ್ಪತ್ರೆಗೆ ₹ 30 ಲಕ್ಷ ಮೌಲ್ಯದ 2 ವೆಂಟಿಲೇಟರ್‌ಗಳು, 950 ಪಿಪಿಐ ಕಿಟ್‌ಗಳು, 2 ಸಾವಿರ ಗ್ಲೌಸ್‌ಗಳು ಇತರೆ ವೈದ್ಯಕೀಯ ಉಪಕರಣಗಳನ್ನು ಒದಗಿಸಲಾಗಿದೆ. ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ₹ 1 ಲಕ್ಷ ಮೌಲ್ಯದ ಆಸ್ಪತ್ರೆ ಪರಿಕರಗಳನ್ನು ನೀಡಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು, ಚೆನ್ನೈ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಇರುವ ತನ್ನ ಷೋರೂಂಗಳ ಮೂಲಕ ನಿತ್ಯವೂ 2 ಸಾವಿರ ಜನರಿಗೆ ಊಟ ನೀಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.