ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೂಲಕ ಸೆಪ್ಟೆಂಬರ್‌ನಲ್ಲಿ ₹1.62 ಲಕ್ಷ ಕೋಟಿ ವರಮಾನ ಸಂಗ್ರಹ ಆಗಿದೆ. ಕಳೆದ ಆಗಸ್ಟ್‌ನಲ್ಲಿ ₹1.59 ಲಕ್ಷ ಕೋಟಿ ವರಮಾನ ಸಂಗ್ರಹ ಆಗಿತ್ತು.
ಆಗಸ್ಟ್‌ನಲ್ಲಿ ಸಂಗ್ರಹ ಆಗಿದ್ದ ವರಮಾನಕ್ಕೆ ಹೋಲಿಸಿದರೆ ಶೇ 10ರಷ್ಟು (₹1.47 ಲಕ್ಷ ಕೋಟಿ) ಏರಿಕೆ ಆಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ನಾಲ್ಕನೇ ಬಾರಿಗೆ ₹1.60 ಲಕ್ಷ ಕೋಟಿ ಗಡಿ ದಾಟಿದೆ.
2023ರ ಸೆಪ್ಟೆಂಬರ್‌ನಲ್ಲಿ ಸಂಗ್ರಹ ಆಗಿರುವ ಒಟ್ಟು ತೆರಿಗೆಯಲ್ಲಿ ಕೇಂದ್ರ ಜಿಎಸ್‌ಟಿ ₹29,818 ಕೋಟಿ, ರಾಜ್ಯ ಜಿಎಸ್‌ಟಿ ₹37,657 ಕೋಟಿ, ಸಮಗ್ರ ಜಿಎಸ್‌ಟಿ ₹83,623 ಕೋಟಿ ಹಾಗೂ ಸೆಸ್ ₹11,695 ಕೋಟಿ ಒಳಗೊಂಡಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.