ನವದೆಹಲಿ: 2024–25ರ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಐ.ಟಿ ಸೇವಾ ಕಂಪನಿ ಎಚ್‌ಸಿಎಲ್ ಟೆಕ್ನಾಲಜೀಸ್ ₹4,235 ಕೋಟಿ ನಿವ್ವಳ ಲಾಭ ಗಳಿಸಿದೆ.
2023–24ರ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹3,832 ಕೋಟಿ ಲಾಭ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 10ರಷ್ಟು ಏರಿಕೆಯಾಗಿದೆ ಎಂದು ಕಂಪನಿ ಷೇರುಪೇಟೆಗೆ ಸೋಮವಾರ ತಿಳಿಸಿದೆ.
ವರಮಾನದಲ್ಲಿ ಶೇ 8ರಷ್ಟು ಏರಿಕೆಯಾಗಿದ್ದು, ₹28,862 ಕೋಟಿಯಾಗಿದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯು ಹೊಸದಾಗಿ 780 ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದು, ಒಟ್ಟು ಉದ್ಯೋಗಿಗಳ ಸಂಖ್ಯೆ 2.18 ಲಕ್ಷಕ್ಕೆ ಮುಟ್ಟಿದೆ ಎಂದು ಕಂಪನಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.