ನವದೆಹಲಿ: ಖಾಸಗಿ ವಲಯದ ಎಚ್‌ಡಿಎಫ್‌ಸಿ ಬ್ಯಾಂಕ್, 2021–22ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ₹10,052 ಕೋಟಿ ನಿವ್ವಳ ಲಾಭ ಗಳಿಸಿದೆ.
2020–21ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ₹8,186.50 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭದಲ್ಲಿ ಶೇ 22.8ರಷ್ಟು ಏರಿಕೆ ಕಂಡುಬಂದಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.
ಬ್ಯಾಂಕ್‌ನ ಒಟ್ಟಾರೆ ವರಮಾನ ₹38,017 ಕೋಟಿಗಳಿಂದ ₹41,086 ಕೋಟಿಗಳಿಗೆ ಏರಿಕೆ ಆಗಿದೆ. ನಿವ್ವಳ ಬಡ್ಡಿ ವರಮಾನವು ಶೇ 10.2ರಷ್ಟು ಹೆಚ್ಚಾಗಿ ₹18,873 ಕೋಟಿಗಳಿಗೆ ತಲುಪಿದೆ.
ವಸೂಲಾಗದ ಸರಾಸರಿ ಸಾಲದ ಪ್ರಮಾಣವು (ಎನ್‌ಪಿಎ) ಶೇ 1.26 ರಿಂದ ಶೇ 1.17ಕ್ಕೆ ಇಳಿಕೆ ಆಗಿದೆ. ನಿವ್ವಳ ಎನ್‌ಪಿಎ ಶೇ 0.40 ರಿಂದ ಶೇ 0.32ಕ್ಕೆ ಇಳಿಕೆ ಕಂಡಿದೆ ಎಂದು ಬ್ಯಾಂಕ್ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.